Thursday, September 21, 2023
HomeNewsಉಕ್ರೇನ್ ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು: Heggaddesamachar

ಉಕ್ರೇನ್ ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು: Heggaddesamachar

ಉಕ್ರೇನ್ ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು:

ಯುದ್ದಪೀಡಿತ ಉಕ್ರೇನ್ʼನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ(Indian Student) ಸಾವನ್ನಪ್ಪಿರುವುದು ಇದೀಗ ದೃಢಪಟ್ಟಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್‌ ಮೂಲದ ಯುವಕ ಚಂದನ್ ಇಂದು ಪಾರ್ಶ್ವವಾಯು(Paralysis)ನಿಂದ ಮೃತ ಪಟ್ಟಿದ್ದಾನೆ ಎನ್ನಲಾಗಿದೆ.

ಏನಾಯ್ತು ಚಂದನ್ ಗೆ…


ಚಂದನ್ ಜಿಂದಾಲ್ (22) ಅನ್ನೋ ಯುವಕ ವಿನ್ನಿಟ್ಸಿಯಾ ನ್ಯಾಷನಲ್ ಪೈರೋಗೊವ್, ಮೆಮೋರಿಯಲ್ ಮೆಡಿಕಲ್ ಯೂನಿವರ್ಸಿಟಿ, ವಿನ್ನಿಟ್ಸಿಯಾ ಉಕ್ರೇನ್ʼನಲ್ಲಿ ಅಧ್ಯಯನ ಮಾಡುತ್ತಿದ್ದನು ಇದೀಗ ಅಸು ನೀಗಿದ್ದಾನೆ. ಇನ್ನು ಚಂದನ್‌ ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿದ್ದು, ವಿನ್ನಿಟ್ಸಿಯಾದ ತುರ್ತು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೆದುಳಿನಲ್ಲಿ ಇಸ್ಚೆಮಿಯಾ ಸ್ಟ್ರೋಕ್ʼನಿಂದ ಬಳಲುತ್ತಿದ್ದ ಚಂದನ್‌ನನ್ನ ನಂತ್ರ ಐಸಿಯುಗೆ ಸ್ಥಳಾಂತರಿಸಲಾಯಿತು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ ಎನ್ನಲಾಗ್ತಿದೆ.

ಇನ್ನು ಅಂತಿಮ ಸಂಸ್ಕಾರಕ್ಕಾಗಿ ಮಗನ ಮೃತದೇಹವನ್ನ ತರಸಿ ಕೊಡುವಂತೆ ಮೃತ ಚಂದನ್‌ ತಂದೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಮೃತ ದೇಹ ಭಾರತಕ್ಕೆ ತಲುಪುತ್ತೋ ಇಲ್ಲವೋ ಅನ್ನುವುದರ ಬಗ್ಗೆ ಇನ್ನೂ ಖಾತ್ರಿ ಇಲ್ಲ.

-HEGGADDESAMACHAR.COM 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments