Sunday, June 11, 2023
HomeFeaturedMovie News'ಜುಗಲ್ ಬಂದಿ' ಕಥೆ ಹೇಳಲಿದ್ದಾರೆ ದಿವಾಕರ್ ಡಿಂಡಿಮ! : heggaddesamachar

‘ಜುಗಲ್ ಬಂದಿ’ ಕಥೆ ಹೇಳಲಿದ್ದಾರೆ ದಿವಾಕರ್ ಡಿಂಡಿಮ! : heggaddesamachar

‘ಜುಗಲ್ ಬಂದಿ’ ಕಥೆ ಹೇಳಲಿದ್ದಾರೆ ದಿವಾಕರ್ ಡಿಂಡಿಮ!

ಜುಗಲ್ ಬಂದಿ..ಕನ್ನಡದಲ್ಲಿ ಹೀಗೊಂದು ಹೊಸ ಸಿನಿಮಾ  ಸದ್ದು ಮಾಡುತ್ತಿದೆ. ಹೊಸಬರೇ ಸೇರಿ ಮಾಡ್ತಿರುವ ಜುಗಲ್ ಬಂದಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. 

ಡಿಂಡಿಮ ಪ್ರೊಡಕ್ಷನ್ ನಡಿ ರೆಡಿಯಾಗ್ತಿರುವ ಜುಗಲ್ ಬಂದಿ ಸಿನಿಮಾಕ್ಕೆ ದಿವಾಕರ್ ಡಿಂಡಿಮ ಆಕ್ಷನ್ ಕಟ್ ಹೇಳಿದ್ದಾರೆ. 
ನಿರ್ದೇಶನದ ಜೊತೆಗೆ ಡಿಂಡಿಮ ಸಿನಿಮಾ ನಿರ್ಮಾಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. 


ಯಶ್ ಶೆಟ್ಟಿ, ಸಂತೋಷ್ ಆಶ್ರಯ್, ಅಶ್ವಿನ್ ರಾವ್ ಪಲ್ಲಕ್ಕಿ, ಅರ್ಚನಾ ಕೊಟ್ಟಿಗೆ, ಮಾನಸಿ ಸುಧೀರ್ ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

ಥ್ರಿಲ್ಲರ್ ಕಥಾಹಂದರ ಹೊಂದಿರುವ ಜುಗಲ್ ಬಂದಿ ಸಿನಿಮಾಕ್ಕೆ ಪ್ರದ್ಯೋತನ್ ಸಂಗೀತ ನಿರ್ದೇಶನ ನೀಡಿದ್ದಾರೆ, ಈ ಹಿಂದೆ ಹಲವು ಸಿನಿಮಾಗಳಿಗೆ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದ ಡಿಂಡಿಮ ಜುಗಲ್ ಬಂದಿ ಸಿನಿಮಾ ಮೂಲಕ ನಿರ್ದೇಶನಾಗಿ ಬಡ್ತಿ ಪಡೆದಿದ್ದಾರೆ.

www.heggaddesamachar.com / Heggadde Studio

 
ಉಳಿದಂತೆ ಕೋ ಡೈರೆಕ್ಟರ್ ಆಗಿ ಬಾಲಕೃಷ್ಣ ಯಾದವ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಸಂತೋಷ್, ಶ್ರೀನಿವಾಸ್,ಕೆಲಸ ನಿರ್ವಹಿಸಲಿದ್ದಾರೆ.

ಫಸ್ಟ್ ಲುಕ್ ಮೂಲಕ ಹೊಸ ನಿರೀಕ್ಷೆ ಹುಟ್ಟಿಸಿರುವ ಜುಗಲ್ ಬಂದಿ ಸಿನಿಮಾ ಇದೇ 20 ರಂದು ಮುಹೂರ್ತ ಮೂಲಕ ಕಿಕ್ ಸ್ಟಾರ್ಟ್ ಆಗಲಿದೆ.

– ಹೆಗ್ಗದ್ದೆ ಸಮಾಚಾರ್.ಕಾಮ್ / heggadde samachar.com

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments