Thursday, September 21, 2023
HomeNewsಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ- ಕಾರಣದ ಹಿಂದೆ ಅನೇಕ ನಿಗೂಢ: Heggaddesamachar

ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ- ಕಾರಣದ ಹಿಂದೆ ಅನೇಕ ನಿಗೂಢ: Heggaddesamachar

ಬೆಂಗಳೂರು: ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ 2 ನೇ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ(30 ) ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

30 ವರ್ಷದ ಸೌಂದರ್ಯ ಎಂಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 2018 ರಲ್ಲಿ ಸೌಂದರ್ಯ ಡಾ. ನೀರಜ್‌ರನ್ನು ಮದುವೆಯಾಗಿದ್ದರು. ಇವರಿಗೆ ಒಂದು ಮಗುವಿದೆ.

ಇಂದು ಪತಿ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಬೆಳಗ್ಗೆ 10 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನೆ ಕೆಲಸದವರು ಬಾಗಿಲು ಬಡಿದರೂ ಸೌಂದರ್ಯ ಬಾಗಿಲು ತೆಗೆದಿಲ್ಲ ಮತ್ತು ಎಷ್ಟೇ ಹೊತ್ತು ಕಾದರೂ ಹೊರಗೆ ಬರಲಿಲ್ಲ. ಹೀಗಾಗಿ ಮನೆ ಕೆಲಸದವರು ನೀರಜ್‌ಗೆ ಫೋನ್‌ ಮಾಡಿ ವಿಷಯ ತಿಳಿಸಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಸೌಂದರ್ಯ ಆತ್ಮಹತ್ಯೆಗೆ ಇನ್ನೂ ಕಾರಣ ಏನೆಂಬುದು ತಿಳಿದುಬಂದಿಲ್ಲ.

-Heggaddesamachar. com 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments