Sunday, June 11, 2023
HomeFeaturedMovie Newsಹೀರೋ ಆಗಿ ಲಾಂಚ್ ಆಗ್ತಿದ್ದಾರೆ ಜನಾರ್ದನ ರೆಡ್ಡಿ ಪುತ್ರ : Heggaddesamachar

ಹೀರೋ ಆಗಿ ಲಾಂಚ್ ಆಗ್ತಿದ್ದಾರೆ ಜನಾರ್ದನ ರೆಡ್ಡಿ ಪುತ್ರ : Heggaddesamachar

ವಾರಾಹಿ ಪ್ರೊಡಕ್ಷನ್ ಹೌಸ್ ನಡಿ 15ನೇ ಸಿನಿಮಾ ಅನೌನ್ಸ್… 


ಟಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಹೈ ಬಜೆಟ್ ಹಾಗೂ ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕ್ತಿದೆ. ಇದೀಗ ವಾರಾಹಿ ರಾಧಾ ಕೃಷ್ಣ ಸಾರಥ್ಯದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡ್ತಿದ್ದು, ಈ ಚಿತ್ರದ ಮೂಲಕ ಜನಾರ್ದನ ರೆಡ್ಡಿ ಪುತ್ರ ಕಿರೀಟಿಯನ್ನು ನಾಯಕನಾಗಿ ಪರಿಚಯಿಸ್ತಿದೆ.

ಇನ್ನೂ ಹೆಸರಿಡದ ಈ ಸಿನಿಮಾವನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಲಾಗ್ತಿದ್ದು, ಲವ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇರಲಿದ್ದು,‌ ಹಲವು ಸೂಪರ್ ಹಿಟ್ ಸಿನಿಮಾಗಳ ತಂತ್ರಜ್ಞರನ್ನು ಈ ಸಿನಿಮಾದ ಭಾಗವಾಗಿದ್ದಾರೆ.

ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಲಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣವನ್ನು ವಹಿಸಲಿದ್ದಾರೆ. ರವೀಂದರ್ ಆರ್ಟ್ ಡೈರೆಕ್ಟರ್ ಆಗಿ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಸೀಕ್ವೆನ್ಸ್‌ಗಳಿಗೆ ನೃತ್ಯ ಸಂಯೋಜನೆ ಮಾಡಲಿದ್ದಾರೆ.

ಮಾರ್ಚ್ 4 ರಂದು ಚಿತ್ರದ ಅದ್ಧೂರಿ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಇತರ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು.

ಪಾತ್ರವರ್ಗ: ಕಿರೀಟಿ

ತಾಂತ್ರಿಕ ಸಿಬ್ಬಂದಿ

ಕಥೆ, ನಿರ್ದೇಶಕ: ರಾಧಾ ಕೃಷ್ಣ

ನಿರ್ಮಾಪಕ: ಸಾಯಿ ಕೊರಪಾಠಿ

ಸಂಗೀತ: ದೇವಿ ಶ್ರೀ ಪ್ರಸಾದ್

ಛಾಯಾಗ್ರಹಣ: ಕೆ ಸೆಂಥಿಲ್ ಕುಮಾರ್

ಪ್ರೊಡಕ್ಷನ್ ಡಿಸೈನರ್: ರವೀಂದರ್

ಸಾಹಸ ನಿರ್ದೇಶಕ: ಪೀಟರ್ ಹೆನ್

ಪತ್ರಿಕಾ ಸಂಪರ್ಕ ಅಧಿಕಾರಿ: ಹರೀಶ್ ಅರಸು

ಜನಾರ್ಧನ ರೆಡ್ಡಿ ಅವರ ಪುತ್ರ ಕಿರೀಟಿ ಚಿತ್ರರಂಗಕ್ಕೆ ಗ್ರಾಂಡ್ ಎಂಟ್ರಿ. ಮಾಯಾಬಜಾರ್ ಖ್ಯಾತಿಯ ರಾಧ ಕೃಷ್ಣ ಆಕ್ಷನ್ ಕಟ್ ಹೇಳುತ್ತಿದ್ದು, ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಪ್ರೊಡಕ್ಷನ್ಸ್ ಬಂಡವಾಳ ಹೂಡುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments